ವಿವಾದಾತ್ಮಕ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲು

Prasthutha|

ಲಕ್ನೋ: ಉತ್ತರ ಪ್ರದೇಶದ ರಾಂಪುರ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ (ಎಸ್ ಪಿ) ನಾಯಕ ಅಜಂ ಖಾನ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

- Advertisement -

ಶಹನಾಝ್ ಬೇಗಂ ಎಂಬ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಉಪ ಪೊಲೀಸ್ ಅಧೀಕ್ಷಕ ಅನುಜ್ ಕುಮಾರ್ ಚೌಧರಿ ತಿಳಿಸಿದ್ದಾರೆ.

ರಾಂಪುರ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಯಲ್ಲಿ ಎಸ್ಪಿ ಅಭ್ಯರ್ಥಿ ಅಸಿಮ್ ರಾಜಾ ಅವರ ಪರವಾಗಿ ಪ್ರಚಾರ ಮಾಡುವಾಗ ಅಜಂ ಖಾನ್ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

 ನಾನು ಕಳೆದ ನಾಲ್ಕು ಸರ್ಕಾರಗಳಲ್ಲಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನಾನು ಈ  ಅಧಿಕಾರವನ್ನು ವೈಯುಕ್ತಿಕವಾಗಿ ಬಳಸಿಕೊಂಡಿದ್ದರೆ,  ಹುಟ್ಟಲಿರುವ ಮಕ್ಕಳು ಕೂಡ ತಮ್ಮ ತಾಯಂದಿರಿಗೆ ಜನ್ಮ ನೀಡಲು ಅವರ ಅನುಮತಿ ಇದೆಯೇ ಎಂದು ಕೇಳುತ್ತಿದ್ದರು ಎಂದು ಅಜಂ ಖಾನ್ ಸಭೆಯಲ್ಲಿ ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ, ಗಂಜ್ ಪೊಲೀಸರು ಖಾನ್ ವಿರುದ್ಧ ಸೆಕ್ಷನ್ 394 (ಬಿ), 354 ಎ, 353 (ಎ), 504, 505 (2), ಭಾರತೀಯ ದಂಡ ಸಂಹಿತೆಯ 509 ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp