ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ: ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು: 9 ಮಂದಿ ಪೊಲೀಸ್ ಠಾಣೆಗೆ ಹಾಜರ್

Prasthutha|

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಂಬತ್ತು ಮಂದಿ ಆರೋಪಿಗಳು ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಮಡಿಕೇರಿಯ ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್ ಮತ್ತಿತರರ ಮೇಲೆ ಎಫ್‌ಐಆರ್ ದಾಖಲಾಗಿದೆ.

ನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಪಡೆಗಳ ಆಗಮನವಾಗಿದೆ. ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

- Advertisement -