ಸೋನಿಯಾ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರದ ಆರೋಪ: ಕೇಸ್ ದಾಖಲು!

Prasthutha|

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್ ಅವರ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -

71 ವರ್ಷದ ಆರೋಪಿ ಪಿಪಿ ಮಾಧವನ್ ,ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬರುತ್ತಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಮತ್ತು 506 ರ ಅಡಿಯಲ್ಲಿ ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.ಜೂನ್ 25 ರಂದು ಮಾಧವನ್ ವಿರುದ್ಧ ಪೊಲೀಸರು ದೂರು ಸ್ವೀಕರಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ.



Join Whatsapp