ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್ ಅವರ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
71 ವರ್ಷದ ಆರೋಪಿ ಪಿಪಿ ಮಾಧವನ್ ,ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬರುತ್ತಿದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಮತ್ತು 506 ರ ಅಡಿಯಲ್ಲಿ ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.ಜೂನ್ 25 ರಂದು ಮಾಧವನ್ ವಿರುದ್ಧ ಪೊಲೀಸರು ದೂರು ಸ್ವೀಕರಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ.