Home ಕರಾವಳಿ ವಿಟ್ಲ | ಆಟೋ ಚಾಲಕನ ಮೇಲೆ ಹಲ್ಲೆ: ಮೂವರ ವಿರುದ್ಧ ಪ್ರಕರಣ ದಾಖಲು

ವಿಟ್ಲ | ಆಟೋ ಚಾಲಕನ ಮೇಲೆ ಹಲ್ಲೆ: ಮೂವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೋಳಂತೂರು ಗ್ರಾಮದ ನಾಡಾಜೆ ನಿವಾಸಿ, ಆಟೋ ಚಾಲಕ ಶಾಕೀರ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು, ಸಾದೀಕ್ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.


ಶಾಕೀರ್ ರಾತ್ರಿ ರಿಕ್ಷಾದಲ್ಲಿ ತನ್ನ ಸ್ನೇಹಿತರೊಂದಿಗೆ ಮನೆಗೆ ಹಿಂದಿರುಗುವಾಗ ಮೂವರು ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೆ ನಾಲ್ಕು ವರ್ಷಗಳ ಹಿಂದಿನ ದ್ವೇಷವೇ ಕಾರಣವೆನ್ನಲಾಗಿದೆ.

Join Whatsapp
Exit mobile version