ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಪ್ರಮುಖ ವ್ಯಕ್ತಿಗಳ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಆರೋಪದ ಮೇಲೆ ದಸ್ನಾ ದೇವಿ ದೇವಾಲಯದ ವಿವಾದಿತ ಅರ್ಚಕ ಯತಿ ನರಸಿಂಗಾನಂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಧಾನಿ ಮತ್ತು ಇತರ ಪ್ರಮುಖ ವ್ಯಕ್ತಿಗಳ ವಿರುದ್ಧ ಅಸಭ್ಯ ಹೇಳಿಕೆಗಳನ್ನು ನೀಡುತ್ತಿರುವ ಯತಿ ನರಸಿಂಗಾನಂದ ಅವರ ವೀಡಿಯೊ ವೈರಲ್ ಆದ ಬೆನ್ನಲ್ಲೇ , ಈ ಬಗ್ಗೆ ಮಸ್ಸೂರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗ್ರಾಮೀಣ ಪೊಲೀಸ್ ಅಧೀಕ್ಷಕ ಇರಾಜ್ ರಾಜಾ ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.