Home ಟಾಪ್ ಸುದ್ದಿಗಳು ಎಟಿಎಂ ಕೇಂದ್ರಗಳಲ್ಲಿ ಕಾರ್ಡ್ ಇಲ್ಲದೇ ನಗದು ಪಡೆಯಲು ಅವಕಾಶ: RBI

ಎಟಿಎಂ ಕೇಂದ್ರಗಳಲ್ಲಿ ಕಾರ್ಡ್ ಇಲ್ಲದೇ ನಗದು ಪಡೆಯಲು ಅವಕಾಶ: RBI

ಮುಂಬೈ: ಯುಪಿಐ ಅನ್ನು ಬಳಸಿಕೊಂಡು ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಕಾರ್ಡು ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸದ್ಯದಲ್ಲಿಯೇ ಜಾರಿಗೆ ತರಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.

ಪ್ರಸ್ತುತ ಎಟಿಎಂ ಕೇಂದ್ರಗಳಲ್ಲಿ ಕಾರ್ಡ್ ರಹಿತ ನಗದು ಹಿಂಪಡೆಯುವ ಸೌಲಭ್ಯವನ್ನು ಕೆಲವೇ ಬ್ಯಾಂಕ್ ಗಳು ನೀಡುತ್ತಿವೆ. ಈಗ ಎಲ್ಲಾ ಬ್ಯಾಂಕ್ ಗಳು ಮತ್ತು ಎಟಿಎಂ ಕೇಂದ್ರಗಳಲ್ಲಿ ಯುಪಿಐ ಅನ್ನು ಬಳಸಿ ಕಾರ್ಡ್ ರಹಿತ ನಗದು ಪಡೆಯುವ ಸೌಲಭ್ಯ ಲಭ್ಯವಾಗುವಂತೆ ಮಾಡಲು ಪ್ರಸ್ತಾಪ ಮಾಡಲಾಗಿದೆ ಎಂದು ಹಣಕಾಸು ನೀತಿ ಘೋಷಿಸುವ ವೇಳೆ ಅವರು ಮಾಹಿತಿ ನೀಡಿದ್ದಾರೆ.

ಕಾರ್ಡ್ ರಹಿತ ನಗದು ಪಡೆಯುವ ಸೌಲಭ್ಯದ ಅಡಿಯಲ್ಲಿ, ಗ್ರಾಹಕರು ಎಟಿಎಂಗಳಿಂದ ಹಣವನ್ನು ಪಡೆಯುವಾಗ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಗಳನ್ನು  ಬಳಸುವ ಅಗತ್ಯವಿರುವುದಿಲ್ಲ. ಇದರಿಂದ ಕಾರ್ಡ್ ಗಳ ದುರುಪಯೋಗ ತಪ್ಪುತ್ತದೆ ಎಂದು ತಿಳಿಸಿದರು.

Join Whatsapp
Exit mobile version