ಸಾಮಾಜಿಕ ಮಾಧ್ಯಮದಲ್ಲಿ ಜಾತಿ ನಿಂದನೆ ಪ್ರಕರಣ | ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

Prasthutha|

ಸಾಮಾಜಿಕ ಮಾಧ್ಯಮದಲ್ಲಿ ಪರಿಶಿಷ್ಟ ಜಾತಿಯವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಯುವಿಕಾ ಚೌಧರಿ ಸೋಮವಾರ ಹರಿಯಾಣದ ಹನ್ಸಿ ಪೊಲೀಸರು ಬಂಧಿಸಿ ಬಳಿಕ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

- Advertisement -

ಕ್ರಿಕೆಟಿಗ ಯಜುವೇಂದ್ರ ಚಾಹಲ್ ವಿರುದ್ಧ ಇನ್‌ಸ್ಟಾಗ್ರಾಮ್ ಲೈವ್ ವಿಡಿಯೋದಲ್ಲಿ ಅವರು ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಸೋಮವಾರವಷ್ಟೇ  ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.ನಟಿ ಯುವಿಕಾ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಾಗಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಟಿಗೆ ಮಧ್ಯಂತರ ಜಾಮೀನು ನೀಡಿದೆ.

“ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪರಿಶಿಷ್ಟ ಜಾತಿಯವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಮಾರ್ಗಸೂಚಿಗಳ ಪ್ರಕಾರ ನನ್ನ ಕಕ್ಷಿದಾರರು ತನಿಖೆಗೆ ಸಹಕರಿಸಿದ್ದಾರೆ. ಅವರು ಈಗ ಮಧ್ಯಂತರ ಜಾಮೀನಿನಲ್ಲಿದ್ದಾರೆ” ಎಂದು ನಟಿ ಯುವಿಕಾ ಚೌಧರಿ ಪರ ವಕೀಲ ಅಶೋಕ್ ಬಿಷ್ಣೋಯ್ ಹೇಳಿದ್ದಾರೆ. ನಟಿ ಯುವಿಕಾ ವಿರುದ್ಧ ವಿರುದ್ಧ ದಲಿತ ಹೋರಾಟಗಾರ ರಜತ್ ಕಲ್ಸನ್ ಅವರು ಹರಿಯಾಣದ ಪೋಲಿಸ್ ಸ್ಟೇಷನ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಯುವಿಕಾ ವಿಡಿಯೊದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಕೆಲವು ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Join Whatsapp