ಮಂಡ್ಯದಲ್ಲಿ ಜಾತಿ ದೌರ್ಜನ್ಯ: ದಲಿತ ಯುವಕನನ್ನು ಹಸುವಿಗೆ ಕಟ್ಟಿ ಮೆರವಣಿಗೆ ಮಾಡಿದ ದುಷ್ಟರು !

Prasthutha|

ಮಂಡ್ಯ: ಹಸು ಕೊಂಡು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಹಲ್ಲೆ ನಡೆಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -


ಮಳವಳ್ಳಿ ತಾಲ್ಲೂಕಿನ ಹಣಕೊಳ ಗ್ರಾಮದ ಸುರೇಶ್ ವರ್ಧನ್ (32) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ದುಗ್ಗನಹಳ್ಳಿಯ ರಾಜು, ಹಣಕೊಳ ಗ್ರಾಮದ ಸುಂದರಮ್ಮ, ಮಳವಳ್ಳಿಯ ಮಲ್ಲಯ್ಯ ಮತ್ತು ಗಿರೀಶ್ ಎಂಬುವವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಅವರು ಕೊರೊನಾ ತಂದೊಡ್ಡಿದ ಸಂಕಷ್ಟದಿಂದಾಗಿ ತನ್ನ ಹಳ್ಳಿಗೆ ಮರಳಿದ್ದರು. ಬಳಿಕ ಹಳ್ಳಿಯಲ್ಲಿಯೇ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸಬೇಕೆಂದುಕೊಂಡಿದ್ದರು. ಆದರೆ ಆತನನ್ನು ಕಳ್ಳತನ ಆರೋಪ ಮಾಡಿ ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ನಡೆಸಿರುವ ವೀಡಿಯೋ ವೈರಲ್ ಆಗಿದೆ.



Join Whatsapp