Home ಟಾಪ್ ಸುದ್ದಿಗಳು ಜಾತಿಗಣತಿ ವರದಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಎಂದ ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಅ. 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದಿಟ್ಟು ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಮುಖಂಡರ ಜೊತೆ ಮುಖ್ಯಮಂತ್ರಿ ಸೋಮವಾರ ಸಭೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿ ಹಿಂದುಳಿದ ವರ್ಗಗಳ ನಾಯಕರು ಪಕ್ಷಾತೀತವಾಗಿ ಜಾತಿಗಣತಿ ವರದಿಯ ಜಾರಿಗೆ ಒತ್ತಾಯಿಸಿದರು.

ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ‘ಇದೇ 10ರಂದು ನಡೆಯುವ ಸಂಪುಟ ಸಭೆಗೆ ಈ ವರದಿಯನ್ನು ತರುವುದಿಲ್ಲ. 18ರ ಸಂಪುಟ ಸಭೆ ಮುಂದೆ ತರುತ್ತೇನೆ’ ಎಂದರು.

ವರದಿಗೆ ವಿರೋಧ ವ್ಯಕ್ತ ಆಗಿದೆಯಲ್ಲವೇ? ಎಂಬ ಪ್ರಶ್ನೆಗೆ, ‘ಸಚಿವ ಸಂಪುಟ ಸಭೆ ಏನು ಹೇಳುತ್ತದೆಯೋ ಹಾಗೆ ಮಾಡುತ್ತೇವೆ. ಸಂಪುಟ ಸಭೆಯ ನಿರ್ಣಯದ ಪ್ರಕಾರ ತಿರ್ಮಾನ ಮಾಡುತ್ತೇವೆ’ ಎಂದರು. 

‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ವರದಿ ಕೊಡಲು ಆಯೋಗ ಅಧ್ಯಕ್ಷರಾಗಿದ್ದ ಕಾಂತರಾಜು ಸಮಯ ನಿಗದಿ ಮಾಡಿದ್ದರು. ಆದರೆ, ಕುಮಾರಸ್ವಾಮಿ ವರದಿ ತೆಗೆದುಕೊಳ್ಳಲಿಲ್ಲ. ಈಗ ನಮ್ಮ ಅವಧಿಯಲ್ಲಿ ವರದಿ ಜಾರಿಗೆ ಹಿಂದುಳಿದ ವರ್ಗಗಳ ನಾಯಕರು ಮನವಿ ಮಾಡಿದ್ದಾರೆ’ ಎಂದರು.

Join Whatsapp
Exit mobile version