ನವೆಂಬರ್’ನಲ್ಲಿ ಜಾತಿ ಜನಗಣತಿ ವರದಿ ನನ್ನ ಕೈ ಸೇರಬಹುದು: ಸಿದ್ದರಾಮಯ್ಯ

Prasthutha|

ಮೈಸೂರು: ನವೆಂಬರ್ ತಿಂಗಳಲ್ಲಿ ಜಾತಿ ಜನಗಣತಿ ವರದಿ ನನ್ನ ಕೈ ಸೇರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ಅವರಿಗೆ ವರದಿ ನೀಡಲಾಗಿತ್ತು. ಆದರೆ ಅವರು ಸ್ವೀಕರಿಸಿಲ್ಲ. ಹೀಗಾಗಿ ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿ ನೀಡಲು ಸೂಚಿಸಿದ್ದು, ನವೆಂಬರ್ ತಿಂಗಳಲ್ಲಿ ಎಂದಿದ್ದಾರೆ.


ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಲಭ್ಯವಾದ ಬಳಿಕ ಪರಿಶೀಲಿಸಿ ತೀರ್ಮಾನ ಮಾಡಲಾಗುವುದು. ಸಮಿತಿ ಅಧ್ಯಕ್ಷರು ಬದಲಾಗಿದ್ದಾರೆ. ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಜಾತಿ ಗಣತಿ ವರದಿ ಸ್ವೀಕರಿಸಲಿಲ್ಲ ಎಂದರು.