ರಾಜ್ಯ

ಭಾರೀ ಮಳೆ: ನಾಳೆ (ಜು.31) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜುಲೈ 31 ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ...

ಮಳೆ ಅಬ್ಬರ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು...

ಉಜಿರೆ | ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತ: ಹಲವು ವಾಹನಗಳು ಜಖಂ

ಉಜಿರೆ: ಮಹಾಮಳೆಗೆ ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತವಾಗಿ ಹಲವು ವಾಹನಗಳು ಜಖಂ ಆಗಿದೆ. ಭಾರಿ ಮಳೆ ಸುರಿಯುತ್ತಿರುವುದರಿಂದ ತಡೆಗೋಡೆ ಕುಸಿತವಾಗಿದೆ. ಅಂದಾಜು 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಸ್ಪತ್ರೆ ಪಾರ್ಕಿಂಗ್...

ವಯನಾಡ್’ನಲ್ಲಿ ಭೂಕುಸಿತ | ಕೇರಳಕ್ಕೆ ಅಗತ್ಯ ನೆರವು ನೀಡಲು ಸಿದ್ದ: ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು...

ಕೊಡಗಿನಲ್ಲಿ 2 ದಿನ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಮತ್ತೆರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯುತ್ತಿದೆ. ಮನೆಗಳು ಕುಸಿಯುತ್ತಿವೆ. ಜನಜೀವನ...

ಶಿರಾಡಿ ಘಾಟ್ ನಲ್ಲಿ ಭಾರೀ ಭೂಕುಸಿತ: ಮಣ್ಣಿನಡಿ ಸಿಲುಕಿದ ಹಲವು ವಾಹನಗಳು

►ವಾಹನ ಸಂಚಾರ ಸಂಪೂರ್ಣ ಬಂದ್ ಹಾಸನ: ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು...

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ. ರಸ್ತೆ ಬಂದ್...

ಸರ್ವಾಧಿಕಾರಿ ಧೋರಣೆಯ ವಿರುದ್ಧ ಎಎಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ SDPI ಬೆಂಬಲ: ಅಬ್ದುಲ್ ಮಜೀದ್

ಬೆಂಗಳೂರು: ಮೋದಿ ನೇತೃತ್ವದ ಸರ್ಕಾರದ ಈ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ಎಎಪಿ ಪಕ್ಷ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್...
Join Whatsapp