ರಾಜ್ಯ

ಶಿರೂರು ಗುಡ್ಡ ಕುಸಿತ: ನಿವೃತ್ತ ಸೇನಾಧಿಕಾರಿ ತಂಡದಿಂದ ಶೋಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ದಿನವಾಗಿದೆ. 11 ಜನರ ಪೈಕಿ ಮೂರು ಜನರ ಶೋಧಕಾರ್ಯ ನಡೆಯುತಿದೆ. ನಿವೃತ್ತ ಸೇನಾಧಿಕಾರಿ ಇಂದ್ರಬಾಲ...

ಮುಡಾ ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಡಾದಲ್ಲಿ ಬದಲಿ ನಿವೇಶನ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್...

ಮೂಗರ ಭಾಷೆ ಗೇಲಿ ಮಾಡಿ ಅಪಹಾಸ್ಯ: ರೇಡಿಯೊ ಜಾಕಿ ಸೇರಿ ಇಬ್ಬರ ಬಂಧನ

ಬೆಂಗಳೂರು: ಮೂಕ ಸನ್ನೆ ಮೂಲಕ ಮಾತು ಬಾರದವರಿಗೆ ಅವಮಾನ ಮಾಡಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ....

ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್

ಬೆಂಗಳೂರು: ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್...

ಕರಾವಳಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಸಚಿವರ ಜೊತೆ ಸ್ಪೀಕರ್ ಯು.ಟಿ ಖಾದರ್ ಚರ್ಚೆ

ಬೆಂಗಳೂರು: ದ.ಕ.ಜಿಲ್ಲೆ ಸಹಿತ ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳ ನಿವಾರಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಐವರು ಸಚಿವರುಗಳ ಜೊತೆ ಚರ್ಚೆ ನಡೆಸಿದರು. ಈ...

ಹುಬ್ಬಳ್ಳಿ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡು

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮುಂಬೈ ಮೂಲದ...

ಕೇರಳ ಗಡಿ ಭಾಗದಲ್ಲಿ ಕನ್ನಡ-ಮಲಯಾಳಿ ಸಾಹಿತ್ಯ ಸಮ್ಮೇಳನಕ್ಕೆ ಕ್ರಮ: ಶಿವರಾಜ್ ತಂಗಡಗಿ

ಬೆಂಗಳೂರು: ಕೇರಳ ಗಡಿ ಭಾಗದಲ್ಲಿ ಕನ್ನಡ-ಮಲಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಗರದಲ್ಲಿ ಗುರುವಾರ ಹಮ್ಮಿಕೊಂಡ ಮಲಯಾಳಿ...
Join Whatsapp