ಕೂಳೂರಿನಲ್ಲಿ ದನಕಳ್ಳತನ: ಆರೋಪಿಗಳ ಬಂಧನ !

Prasthutha: December 4, 2021

ಮಂಗಳೂರು: ಕೂಳೂರಿನಲ್ಲಿ ಮನೆಯವರಿಗೆ ತಲವಾರು ತೋರಿಸಿ, ಮೂರು ದನಗಳನ್ನು ಕದ್ದೊಯ್ದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆಯ ನಿವಾಸಿಗಳಾದ ಮುಹಮ್ಮದ್ ಸಲೀಂ(32), ಮುಹಮ್ಮದ್ ತಂಜಿಲ್(25), ಮುಹಮ್ಮದ್ ಇಕ್ಬಾಲ್ (23) ಬಂಧಿತರು. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಬಳಿಯ ಮನೆಯ ಆವರಣದಲ್ಲಿ ಕಟ್ಟಿಹಾಕಿದ್ದ ಮೂರು ದನಗಳನ್ನು ಶುಕ್ರವಾರ ನಸುಕಿನ ನಾಲ್ಕು ಗಂಟೆ ಸುಮಾರಿಗೆ ಸ್ಕಾರ್ಪಿಯೋ ವಾಹನಕ್ಕೆ ತುಂಬಿ ಕದ್ದೊಯ್ದಿದ್ದರು. ಈ ವೇಳೆ, ಪರಿಸರದ ಜನರು ಸೇರಿ ಬೊಬ್ಬೆ ಹೊಡೆದಿದ್ದು,ಈ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಇಂದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ..

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ