ಕಾವೇರಿ ವಿವಾದ: ಸೆ. 29ರಂದು ಕರ್ನಾಟಕ ಬಂದ್!

Prasthutha|

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್ ಸಿ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ಈ ನಿರ್ಧಾರವನ್ನು ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು, ರೈತರು ಮತ್ತು ಬಿಜೆಪಿ ಪ್ರತಿಭಟನೆ ಮಾಡುತ್ತಿವೆ.

- Advertisement -


ಈ ಸಂದರ್ಭದಲ್ಲಿ ಕರ್ನಾಟಕ ಬಂದ್ ಗೂ ಕೂಡ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 29ರಂದು ರಾಜ್ಯ ಬಂದ್ ನಡೆಸಲು ದಿನಾಂಕ ಫಿಕ್ಸ್ ಆಗಿದೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

Join Whatsapp