Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇಂದು(ಸೆ.22) ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆಯಿದೆ. ಈ ವೇಳೆ ತಮಿಳುನಾಡು ಸರ್ಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಯಬಹುದು. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದರು.

ಮುಖ್ಯವಾಗಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಹೆಚ್ಚು ನಿಗಾ ಇಡುವಂತೆ ಸೂಚಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ರಸ್ತೆ ತಡೆ ನಡೆಸುವವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವಂತೆ ಬೆಂಗಳೂರಿನ ಎಲ್ಲಾ ಡಿಸಿಪಿಗಳಿಗೆ ಪೊಲೀಸ್ ಆಯುಕ್ತ ದಯಾನಂದ್ ಸೂಚಿಸಿದ್ದಾರೆ.

ನಾಳೆ ಮಂಡ್ಯ ಬಂದ್​

ಸುಪ್ರೀಂ ಕೋರ್ಟ್​ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ (ಸೆ.23) ರಂದು ಮಂಡ್ಯ ಬಂದ್​ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಈ ಸಂಬಂಧ ಇಂದು ರಾಜಕೀಯ ಪಕ್ಷಗಳ ನಾಯಕರು, ವರ್ತಕರು, ಸಂಘಟನೆ ಮುಖಂಡರು ಸೇರಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಮಂಡ್ಯ ನಗರ ಬಂದ್‌ನ ರೂಪರೇಷೆ ಬಗ್ಗೆ ಚರ್ಚೆ ಮಾಡಲಿದ್ದಾರೆ.

Join Whatsapp
Exit mobile version