ಕಾವೇರಿ ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ದೇವೇಗೌಡ ಪತ್ರ

Prasthutha|

ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್​ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ. ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ಕರ್ನಾಟಕದ ರೈತರಿಗೆ ನೀರಿನ ಕೊರತೆ ಇದೆ. ಹೀಗಾಗಿ ಶೀಘ್ರವಾಗಿ ಈ ವಿವಾದ ಬಗೆಹರಿಸಬೇಕು ಎಂದು ಹೆಚ್​ಡಿ ದೇವೇಗೌಡ ಅವರು, ನರೇಂದ್ರ ಮೋದಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಜೆಡಿಎಸ್​, ಎನ್​ಡಿಎ ಮೈತ್ರಿಕೂಟಕ್ಕೆ ಸೇರಿದ್ದು, ಇದರ ಬೆನ್ನಲ್ಲೇ ಇದೀಗ ದೇವೇಗೌಡ್ರು ಮೋದಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.

Join Whatsapp