ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ.
ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿದೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿವೆ.