ಹೊಸದಿಲ್ಲಿ: ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು (ಸೆ.20) ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ.
ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ನಲ್ಲಿ ನಡೆಯುವ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ.
ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದ ವಿರುದ್ಧ ರಾಜ್ಯದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೆ ರಾಜ್ಯದಲ್ಲಿ ಬರ ಆವರಿಸಿದ್ದು, ಈ ಮಧ್ಯೆಯೇ ನೀರು ಬಿಡಬೇಕು ಎಂಬ ಆದೇಶ ಕಾವೇರಿ ತೀರದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.