ಕಾವೇರಿ ನೀರು ವಿವಾದ: ಇಂದು ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

Prasthutha|

ಹೊಸದಿಲ್ಲಿ: ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು (ಸೆ.20) ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ.

- Advertisement -

ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್​ನಲ್ಲಿ ನಡೆಯುವ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ.

ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದ ವಿರುದ್ಧ ರಾಜ್ಯದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೆ ರಾಜ್ಯದಲ್ಲಿ ಬರ ಆವರಿಸಿದ್ದು, ಈ ಮಧ್ಯೆಯೇ ನೀರು ಬಿಡಬೇಕು ಎಂಬ ಆದೇಶ ಕಾವೇರಿ ತೀರದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.