ಚೆನ್ನೈ: ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ರೈತ ಗುಂಪುಗಳು ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್ ಗೆ ಕರೆ ನೀಡಿವೆ. ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಒತ್ತಾಯಿಸಿದ್ದಾರೆ.
ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸಿದ್ದಾರೆ. ಅಲ್ಲದೇ ರೈತರ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ವಿರುದ್ಧವೂ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಂದ್ ಗೆ ಸ್ಪಂದಿಸಿ ತಂಜಾವೂರು, ತಿರುಚ್ಚಿ, ತಿರುವರೂರ್, ನಾಗಪಟ್ಟಿಣಂ, ಪುದುಕೊಟ್ಟೈ, ಮೈಲಾಡುತುರೈ, ಕಡಲೂರು ಮತ್ತು ಅರಿಯಲೂರು ಸೇರದಂತೆ ಎಂಟು ಜಿಲ್ಲೆಗಳಲ್ಲಿ ಅಂಗಡಿಗಳನ್ನು ಮುಚ್ಚಲಾಗಿದೆ.