Home ಟಾಪ್ ಸುದ್ದಿಗಳು ಕಾವೇರಿ ನದಿ ನೀರು ಹಂಚಿಕೆ ವಿವಾದ: ಸರ್ವಪಕ್ಷ ಸಭೆ ಆರಂಭ

ಕಾವೇರಿ ನದಿ ನೀರು ಹಂಚಿಕೆ ವಿವಾದ: ಸರ್ವಪಕ್ಷ ಸಭೆ ಆರಂಭ

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಬುಧವಾರ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ.


ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.


ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕಾರಣ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ರೈತರ ಮತ್ತು ತಮಿಳುನಾಡಿಗೆ ಬಿಡಬೇಕಾದ ನೀರಿನ ಬಗ್ಗೆ ಚರ್ಚೆ ನಡೆಸಲು ಸರ್ವ ಪಕ್ಷಗಳ ಸಭೆ ಕರೆದಿದೆ.

Join Whatsapp
Exit mobile version