ನವದೆಹಲಿ: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆ ಮೂಲಕ ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲೂ ಹಿನ್ನಡೆಯಾಗಿದೆ.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆನೀಡಬೇಕು ಎಂದು ರಾಜ್ಯದ ಮನವಿಯನ್ನು ಮಾನ್ಯ ಸುಪ್ರೀಂ ಕೋರ್ಟ್ ಮಾನ್ಯ ಮಾಡಲಿಲ್ಲ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಪೀಠ ನಿರಾಕರಿಸಿತು.
ಬಳಿಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದೂ ಸೂಚಿಸಿದೆ.