Home ಟಾಪ್ ಸುದ್ದಿಗಳು 1.29 ಕೋಟಿ ರೂ ಲಂಚ: ರೈಲ್ವೆ ಇಂಜಿನಿಯರ್ ವಿರುದ್ಧ ಸಿಬಿಐ ಕೇಸ್

1.29 ಕೋಟಿ ರೂ ಲಂಚ: ರೈಲ್ವೆ ಇಂಜಿನಿಯರ್ ವಿರುದ್ಧ ಸಿಬಿಐ ಕೇಸ್

ಬೆಂಗಳೂರು:ಖಾಸಗಿ ಗುತ್ತಿಗೆದಾರರಿಂದ 2011-2019 ರ ಸಾಲಿನಲ್ಲಿ 1.29 ಕೋಟಿ ರೂ ಲಂಚ ಸ್ವೀಕರಿಸಿದ ಆರೋಪದಲ್ಲಿ ನೈಋತ್ಯ ರೈಲ್ವೆ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಕೇಂದ್ರೀಯ ತನಿಖಾ ದಳ-ಸಿಬಿಐ ಪ್ರಕರಣವನ್ನು ದಾಖಲಿಸಿದೆ.
ನೈರುತ್ಯ ರೈಲ್ವೆ ಬೆಂಗಳೂರಿನ ಎಕ್ಸಿಕ್ಯೂಟಿವ್ ಇಂಜಿನಿಯರ್ ಘನ ಶ್ಯಾಮ್ ಪ್ರಧಾನ್ ಮತ್ತು ಇಬ್ಬರು ಗುತ್ತಿಗೆದಾರರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ.


ಗುತ್ತಿಗೆದಾರರು ನಿರ್ವಹಿಸುವ ಕೆಲಸಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಕಾರ್ಯನಿರ್ವಾಹಕ ಇಂಜಿನಿಯರ್ ಲಂಚವನ್ನು ಸ್ವೀಕರಿಸಿದ್ದಾರೆ. ತನಿಖೆಯ ಭಾಗವಾಗಿ ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಮಹಾರಾಷ್ಟ್ರದ ಸಾಂಗ್ಲಿ, ನಂದ್ಯಾಲ ಮತ್ತು ತೆಲಂಗಾಣದ ರಂಗಾರೆಡ್ಡಿ ಸೇರಿದಂತೆ 16 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತ್ತು.

Join Whatsapp
Exit mobile version