ರಣಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ದೋಷಿ : ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು

Prasthutha|

ನವದೆಹಲಿ: ರಣಜಿತ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಕುಲಾ ವಿಶೇಷ ಸಿಬಿಐ ನ್ಯಾಯಾಲಯ ಇಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ದೋಷಿ ಎಂದು ತೀರ್ಪು ನೀಡಿದೆ. ಮಾತ್ರವಲ್ಲ ನ್ಯಾಯಾಧೀಶರು ಅಕ್ಟೋಬರ್ 12ಕ್ಕೆ ಶಿಕ್ಷೆಯನ್ನು ಕಾಯ್ದಿರಿಸಿದ್ದಾರೆ.

- Advertisement -

ಪ್ರಕರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯದಿಂದ ಪಂಜಾಬ್, ಹರ್ಯಾಣ ಅಥವಾ ಚಂಡೀಗಡದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕಳೆದ ವಾರ ಪಂಜಾಬ್, ಹರ್ಯಾಣ ನ್ಯಾಯಾಲಯ ವಜಾಗೊಳಿಸಿತ್ತು. ರಣಜಿತ್ ಸಿಂಗ್ ಮಗ ಜಗಸೀರ್ ಸಿಂಗ್ ಅವರು ಆಗಸ್ಟ್ 24 ರಂದು ಸಲ್ಲಿಸಿರುವ ಅರ್ಜಿಯು ಇನ್ನೂ ವಿಚಾರಣೆಗೆ ಬಾಕಿಯಿದೆ.

ಡೇರಾದ ಪ್ರಭಾವಿ 10 ಸದಸ್ಯರ ಸಮಿತಿ ಸದಸ್ಯ ರಣಜಿತ್ ಸಿಂಗ್ ಅವರನ್ನು ಜುಲೈ 10, 2002 ರಂದು ನಾಲ್ವರು ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮೀತ್ ರಾಮ್ ರಹೀಮ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

- Advertisement -

ಗುರ್ಮಿತ್ ತನ್ನ ಇಬ್ಬರು ಮಹಿಳಾ ಶಿಷ್ಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಮಾತ್ರವಲ್ಲ ಪತ್ರಕರ್ತ ರಾಮ್ ಚಂದರ್ ಛತರ್ಪತಿ ಹತ್ಯೆಗಾಗಿ ಜೀವಾವಧಿ ಶಿಕ್ಷೆಯನ್ನೂ ವಿಧಿಸಲಾಗಿತ್ತು. ಪ್ರಸಕ್ತ ಅವರು ಡೇರಾದ ಅನುಯಾಯಿಗಳ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎದುರಿಸುತ್ತಿದ್ದಾನೆ

Join Whatsapp