ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್ ಸಲ್ಲಿಕೆ

Prasthutha|

ದೆಹಲಿ: ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಸಿಬಿಐ ರೋಸ್ ಅವೆನ್ಯೂ ಕೋರ್ಟ್ ಗೆ ಚಾರ್ಜ್ಶೀಟ್ ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿರುವ ಸಮಯದಲ್ಲಿ ಸಿಬಿಐ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

- Advertisement -


ಈ ಪ್ರಕರಣವು ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ್ದಾಗಿದೆ. ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.


ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಹಾಗೂ ಎಎಪಿ ಶಾಸಕ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದೆ.



Join Whatsapp