ಭ್ರಷ್ಟಾಚಾರ ಪ್ರಕರಣ| ನಿವೃತ್ತ ನ್ಯಾಯಮೂರ್ತಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

Prasthutha|

ಹೊಸದಿಲ್ಲಿ: ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.

- Advertisement -

ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಅನುಮತಿ ನೀಡಲಾಗಿದೆ.
ಖಾಸಗಿ ಮೆಡಿಕಲ್ ಕಾಲೇಜೊಂದಕ್ಕೆ ಅನುಕೂಲವಾಗುವ ರೀತಿಯಲ್ಲಿ ಆದೇಶ ಹೊರಡಿಸಿದ್ದರು ಎಂಬ ಆರೋಪ ಎದುರಿಸುತ್ತಿರುವ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಿ ಸಿಬಿಐ ಕಳೆದ ಏಪ್ರಿಲ್ 16ರಂದು ಅರ್ಜಿ ಸಲ್ಲಿಸಿತ್ತು. ಈಗ ಅಲಹಾಬಾದ್ ಹೈಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ.

ಈ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್ಐಆರ್ ದಾಖಲಿಸಿದೆ. ನಿವೃತ್ತ ನ್ಯಾಯಮೂರ್ತಿ ಶುಕ್ಲಾ ಅವರಲ್ಲದೇ, ಛತ್ತೀಸಗಡ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಐ.ಎಂ.ಕುದ್ದುಸಿ, ಪ್ರಸಾದ್ ಎಜುಕೇಷನ್ ಟ್ರಸ್ಟ್ನ ಭಗವಾನ್ ಪ್ರಸಾದ್ ಯಾದವ್, ಪಲಾಶ್ ಯಾದವ್, ಖಾಸಗಿ ವ್ಯಕ್ತಿಗಳಾದ ಭಾವನಾ ಪಾಂಡೆ, ಸುಧೀರ್ ಗಿರಿ ಎಂಬುವವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.



Join Whatsapp