ಅಕ್ರಮ ಆಸ್ತಿ ಹೊಂದಿರುವ ಆರೋಪ: ಡಿಕೆಶಿ ಆಪ್ತರಿಗೆ ಸಿಬಿಐ ನೋಟಿಸ್‌

Prasthutha|

- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರ ಆಪ್ತರಿಗೆ ಸಿಬಿಐ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರೊಂದಿಗೆ ವ್ಯಾವಹಾರಿಕ ನಂಟು ಹೊಂದಿರುವ ವ್ಯಕ್ತಿಗಳಿಗೆ ನೋಟಿಸ್‌ ಜಾರಿಮಾಡಿರುವ ತನಿಖಾ ತಂಡ, ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗೆ ಬರುವಂತೆ ಸೂಚಿಸಿದೆ. ತಮ್ಮ ಜತೆ ವಹಿವಾಟು ನಡೆಸಿರುವವರು, ಆಪ್ತರಾಗಿರುವ 80ಕ್ಕೂ ಹೆಚ್ಚು ಜನರಿಗೆ ಸಿಬಿಐ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

- Advertisement -

ಡಿ.ಕೆ. ಶಿವಕುಮಾರ್‌ ಅವರ ಅತ್ಯಂತ ನಿಕಟವರ್ತಿಗಳಲ್ಲಿ ಒಬ್ಬರಾಗಿರುವ ವಿಜಯ್‌ ಮುಳುಗುಂದ ಅವರಿಗೆ ನೋಂದಾಯಿತ ಅಂಚೆ ಮೂಲಕ ನೋಟಿಸ್‌ ರವಾನಿಸಲಾಗಿದೆ. ಆಗಸ್ಟ್‌ 30ರಂದು ಸಿಬಿಐ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚಿಸಲಾಗಿದೆ.

Join Whatsapp