ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ

Prasthutha|

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ 20 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶುಕ್ರವಾರ ಬೆಳಿಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಶೋಧ ನಡೆಸಿದೆ.

- Advertisement -

“ಸಿಬಿಐ ಬಂದಿದೆ” ಎಂದು ಟ್ವೀಟ್ ಮಾಡಿರುವ ಮನೀಶ್ ಸಿಸೋಡಿಯಾ, “ನಾವು ಪ್ರಾಮಾಣಿಕರಾಗಿದ್ದೇವೆ, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ. ದುರದೃಷ್ಟವಶಾತ್, ಈ ದೇಶದಲ್ಲಿ, ಯಾರು ಒಳ್ಳೆಯ ಕೆಲಸವನ್ನು ಮಾಡುತ್ತಾರೋ ಅವರು ಈ ರೀತಿ ತೊಂದರೆಗೀಡಾಗುತ್ತಾರೆ, ಅದಕ್ಕಾಗಿಯೇ ನಮ್ಮ ದೇಶವು ಇನ್ನೂ ನಂಬರ್ -1 ಆಗಿಲ್ಲ” ಎಂದು ಅವರು ಹೇಳಿದರು.

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಮತ್ತು ಅಂದಿನ ದೆಹಲಿ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಅವರ ನಿವಾಸ ಸೇರಿದಂತೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ-ಎನ್ಸಿಆರ್ ನ 21 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಉಪಮುಖ್ಯಮಂತ್ರಿ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.



Join Whatsapp