ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಎಜುಕೇಶನ್ ಫೌಂಡೇಶನ್ ಸಂಸ್ಥೆಗೆ ಡಿ ಕೆ ಶಿವಕುಮಾರ್ ಅಧ್ಯಕ್ಷರಾಗಿದ್ದು, ಅವರ ಮಗಳು ಐಶ್ವರ್ಯ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ.
ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸಿ, ಮಾಹಿತಿ ಪಡೆಯುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿ ಮಾಹಿತಿ ಪಡೆದಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ತಮ್ಮ ಮಾಲೀಕತ್ವದ ನ್ಯಾಷನಲ್ ಎಜುಕೇಶನ್ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ತನಿಖಾ ಸಂಸ್ಥೆಯಿಂದ ನಿರಂತರ ಕಿರುಕುಳ ಇದೆ. ಎಲ್ಲಾ ಹಂತಗಳಲ್ಲಿ ತನಿಖೆ ನಡೆದಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ ಭಯಪಡುವುದಿಲ್ಲ. ಕಾಂಗ್ರೆಸ್ ನವರಿಗೆ ತೊಂದರೆ ಕೊಡಬೇಕೆಂದು ಹೀಗೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.