ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗೆ 750 ಕೋಟಿ ರೂ.ಗಳ ವಂಚನೆ: ರೊಟೊಮ್ಯಾಕ್ ಮತ್ತು ಅದರ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲು

Prasthutha|

ನವದೆಹಲಿ: ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ₹750.54 ಕೋಟಿ ವಂಚನೆಗೆ ಸಂಬಂಧಿಸಿದಂತೆ ಕಾನ್ಪುರ ಮೂಲದ ರೊಟೊಮ್ಯಾಕ್ ಗ್ಲೋಬಲ್ ಕಂಪನಿ ಮತ್ತು ಅದರ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖಾ ಸಂಸ್ಥೆ ಕಂಪನಿ ಮತ್ತು ಅದರ ನಿರ್ದೇಶಕರಾದ ಸಾಧನಾ ಕೊಠಾರಿ ಮತ್ತು ರಾಹುಲ್ ಕೊಠಾರಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಲೇಖನ ಸಾಮಗ್ರಿಗಳ ವ್ಯವಹಾರದಲ್ಲಿ ತೊಡಗಿರುವ ಕಂಪನಿಯು ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಏಳು ಬ್ಯಾಂಕ್ ಗಳ ಒಕ್ಕೂಟಕ್ಕೆ ₹2,919 ಕೋಟಿ ರೂಪಾಯಿ ಬಾಕಿ ಇರಿಸಿಕೊಂಡಿದೆ. ಇದರಲ್ಲಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ಶೇ 23 ರಷ್ಟು ಇದೆ.

- Advertisement -

ಒಕ್ಕೂಟದ ಸದಸ್ಯ ಬ್ಯಾಂಕ್ ಗಳ ದೂರುಗಳ ಆಧಾರದ ಮೇಲೆ ಕಂಪನಿಯು ಈಗಾಗಲೇ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆಗಳನ್ನು ಎದುರಿಸುತ್ತಿದೆ.

Join Whatsapp