ಬಿಹಾರ ಡಿಸಿಎಂ ತೇಜಸ್ವಿ ಯಾದವ್’ಗೆ ಸಿಬಿಐ ಸಮನ್ಸ್

Prasthutha|

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಿಹಾರದ ಉಪಮುಖ್ಯಮಂತ್ರಿ ಮತ್ತು ಆರ್’ಜೆಡಿ ಮುಖಂಡ ತೇಜಸ್ವಿ ಯಾದವ್’ಗೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಸಮನ್ಸ್ ಜಾರಿ ಮಾಡಿದೆ.

- Advertisement -

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹಾಜರಿದ್ದ ನವದೆಹಲಿಯ ಮನೆ ಸೇರಿದಂತೆ ಯಾದವ್ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ನಡೆಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಯಾದವ್ ಅವರನ್ನು ಈ ಹಿಂದೆ ಮಾರ್ಚ್ 4 ರಂದು ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಶನಿವಾರ ಹೊಸ ದಿನಾಂಕವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಆರ್’ಜೆಡಿ ನಾಯಕ ಇಂದು ಮಧ್ಯಾಹ್ನ ಸಿಬಿಐ ಪ್ರಧಾನ ಕಚೇರಿಯಲ್ಲಿ ಹಾಜರಾಗಬೇಕಿತ್ತು, ಆದರೆ ಇನ್ನೂ ಹಾಜರಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp