ಮಹಂತ್ ನರೇಂದ್ರ ಗಿರಿ ಅನುಮಾನಾಸ್ಪದ ಸಾವಿನ ತನಿಖೆ ಆರಂಭಿಸಿದ ಸಿಬಿಐ

Prasthutha|

ನವದೆಹಲಿ: ಉತ್ತರಪ್ರದೇಶದ ಪ್ರಯಾಗ್ ನಲ್ಲಿ ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಅಖಾರಿ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐ ಗೆ ವಹಿಸಿದ್ದು, ತನಿಖೆ ಆರಂಬಿಸಿದೆ.

- Advertisement -

ಮಹಂತ್ ನರೇಂದ್ರ ಗಿರಿ ಅವರು ಭಾರತೀಯ ಅಖಾರಿ ಪರಿಷತ್ ನ ಅಧ್ಯಕ್ಷರಾಗಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಪ್ರಯಾಗ್ ರಾಜ್ ಆಶ್ರಮದಲ್ಲಿ ಪತ್ತೆಯಾಗಿತ್ತು. ಸಾಕಷ್ಟು ವಿವಾದ ಸೃಷ್ಟಿಸಿದ ಈ ಸಾವಿನ ಕುರಿತು ಕೂಲಂಕಷ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು.

ಪ್ರಸಕ್ತ ಈ ಮೇಲಿನ ಪ್ರಕರಣವನ್ನು ಯೋಗಿ ಸರ್ಕಾರ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಸಿಬಿಐ ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ತನಿಖೆ ಆರಂಭಿಸಿದೆ.

Join Whatsapp