Home ಟಾಪ್ ಸುದ್ದಿಗಳು ಉಕ್ರೇನ್ ಯುದ್ಧಕ್ಕೆ ರಷ್ಯಾಗೆ ಭಾರತೀಯರ ಕಳ್ಳಸಾಗಣೆ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿದ CBI

ಉಕ್ರೇನ್ ಯುದ್ಧಕ್ಕೆ ರಷ್ಯಾಗೆ ಭಾರತೀಯರ ಕಳ್ಳಸಾಗಣೆ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿದ CBI

ನವದೆಹಲಿ: ವಿದೇಶದಲ್ಲಿ ಉದ್ಯೋಗ ನೀಡುವ ಆಮಿಷ ನೀಡಿ ಭಾರತೀಯರನ್ನು ರಷ್ಯಾ-ಉಕ್ರೇನ್ ಯುದ್ಧ ವಲಯಕ್ಕೆ ಕರೆದೊಯ್ದಿದ್ದ ಪ್ರಮುಖ ಮಾನವ ಕಳ್ಳಸಾಗಣೆ ಜಾಲವೊಂದನ್ನು ಸಿಬಿಐ ಪತ್ತೆಹಚ್ಚಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಏಳು ನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಜೆನ್ಸಿ ಶೋಧ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ವಿವಿಧ ವೀಸಾ ಸಲಹಾ ಸಂಸ್ಥೆಗಳು ಮತ್ತು ಏಜೆಂಟರ ವಿರುದ್ಧ ಏಜೆನ್ಸಿ ಎಫ್‌ಐಆರ್ ದಾಖಲಿಸಲಾಗಿದೆ. ಶೋಧದ ಸಮಯದಲ್ಲಿ ಹಲವಾರು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು 50 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

Join Whatsapp
Exit mobile version