Home ಟಾಪ್ ಸುದ್ದಿಗಳು CBSE 10ನೇ ತರಗತಿ ಫಲಿತಾಂಶ ಪ್ರಕಟ

CBSE 10ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ ಇ) 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ.


ಪ್ರಸ್ತುತ ವರ್ಷ ಶೇ 93.12 ಫಲಿತಾಂಶ ಪ್ರಕಟಗೊಂಡಿದ್ದು, ಇದು ಕಳೆದ ಬಾರಿಗಿಂತ ಶೇ 1.28 ರಷ್ಟು ಕಡಿಮೆಯಾಗಿದೆ. ಕಳೆದ ವರ್ಷ ಶೇ 94.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಕೂಡ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.


ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಸಿಬಿಎಸ್ಇ ಅಧಿಕೃತ ವೆಬ್ಸೈಟ್ ಗಳಾದ results.cbse.nic.in ಅಥವಾ cbseresults.nic.in ನಲ್ಲಿ ಪರಿಶೀಲಿಸಬಹುದು.

Join Whatsapp
Exit mobile version