ಜನವರಿ-ಫೆಬ್ರವರಿಯಲ್ಲಿ CBSE 10 ಮತ್ತು 12ನೇ ತರಗತಿ ಪರೀಕ್ಷೆ ಇಲ್ಲ : ಪೊಖ್ರಿಯಾಲ್

Prasthutha|

ನವದೆಹಲಿ : ಇತ್ತೀಚಿಗಷ್ಟೇ ಕೊರೊನ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ ಇ ಬೋರ್ಡ್ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ಘೋಷಣೆ ಮಾಡಿದ್ದರು. ಆದರೆ, ಈ ನಡುವೆ ಇದೀಗ ಹೊಸ ರೂಪಾಂತರಗೊಂಡ ಕೊರೊನ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತಂತೆ ಮಂಗಳವಾರ ಶಿಕ್ಷಕರೊಂದಿಗೆ ನಡೆಸಿದ ಸಂವಾದದಲ್ಲಿ ಅವರು ಈ ವಿಷಯ ಸ್ಪಷ್ಟ ಪಡಿಸಿದ್ದಾರೆ. ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10 ಮತ್ತು 12ನೇ ತರಗತಿಗಳ ಪರೀಕ್ಷೆಗಳು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲ್ಲ. ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement -