ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ

Prasthutha|

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ ನಡೆಸುವ ಮೂಲಕ ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​​ಗಳಿಗೆ ಬಿಸಿ ಮುಟ್ಟಿಸಿದ್ದಾರೆ.

- Advertisement -

553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್​ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಿಸಿದ ಹೋಟೆಲ್, ರೆಸ್ಟೋರೆಂಟ್, ಬಾರ್​ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp