ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Prasthutha|

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಜೈಲಿನಿಂದಲೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು ಮತ್ತು ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ಈ ವೇಳೆ ಜೈಲಿನ ಬ್ಯಾರಕ್ ನಲ್ಲಿದ್ದ ಕೆಲ ಖೈದಿಗಳ ಬಳಿಯಿಂದ ನಗದು ವಶಕ್ಕೆ ಪಡೆಯಲಾಗಿದೆ. ಜೈಲಿನೊಳಗೆ ಚಾಕು ಸಹ ಪತ್ತೆಯಾಗಿದೆ. ಕೈದಿಗಳ ಬಳಿ ಇದ್ದ 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp