ಹೈದ್ರಾಬಾದ್: ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ 2024ರ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಪಡೆ ಗೆಲುವಿನ ಓಟವನ್ನು ಮುಂದುವರೆಸಿದೆ. ಭಾನುವಾರ ಹೈದರಾಬಾದ್‌ನ ಶ್ರೀ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಚೆನ್ನೈ ರಿನೋಸ್ ವಿರುದ್ಧ 67 ರನ್‌ಗಳ ಭಾರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಚೆನ್ನೈ ರಿನೋಸ್ ತಂಡ ಮೊದಲು ಬೌಲಿಂಗ್ ಮಾಡಿದೆ. ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 137 ರನ್‌ಗಳ ರನ್ ಕಲೆ ಹಾಕಿತು. ಡಾರ್ಲಿಂಗ್ ಕೃಷ್ಣ ಅತ್ಯುತ್ತಮ ಫಾರ್ಮ್ ಮುಂದುವರೆಸಿದರು.
ಸಿಸಿಎಲ್ 2024ರ ಆವೃತ್ತಿಯ ನಾಲ್ಕನೇ ಅರ್ಧಶತಕ ಗಳಿಸಿದರು. ಡಾಲಿಂಗ್ ಕೃಷ್ಣ 22 ಎಸೆತಗಳಲ್ಲಿ 57 ರನ್ ಗಳಿಸಿದರೆ, ಪ್ರದೀಪ್ 33 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿ ಮಿಂಚಿದರು.