ಸಂತೋಷ್ ಆತ್ಮಹತ್ಯೆಯ ಹಿಂದೆ ‘ಮಹಾನ್ ನಾಯಕ’ನ ‘ಸಿಡಿ’ ತಂಡದ ಕೈವಾಡ: ರಮೇಶ್ ಜಾರಕಿಹೊಳಿ

Prasthutha|

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ‘ಮಹಾನ್ ನಾಯಕ’ನ ತಂಡದ  ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧದ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದ ಮಹಾ ನಾಯಕನ ತಂಡವೇ ಈಗ ಸಚಿವ ಈಶ್ವರಪ್ಪ ವಿರುದ್ಧ ಷಡ್ಯಂತ್ರವನ್ನು ಮಾಡುತ್ತಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಕಾರಣವಾಗಿದೆ. ಈಗ ನಾನು ಯಾವುದೇ ನಾಯಕರ ಹೆಸರನ್ನು ಹೇಳಲು ಹೋಗುವುದಿಲ್ಲ ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಬಿಐ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುವ ವರೆಗೂ ಸಚಿವ ಕೆ ಎಸ್ ಈಶ್ವರಪ್ಪನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತಮ್ಮ ವಿರುದ್ಧದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ನಂತರ ರಾಜೀನಾಮೆ ನೀಡಲಿ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

- Advertisement -

ಸೋಮವಾರ ಎಲ್ಲ ಘಟನೆಯ ಕುರಿತು ವಿವರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಮಹಾನ್ ನಾಯಕ ಎಂಬ ತಮ್ಮ ಹಳೆಯ ಧಾಟಿಯಲ್ಲಿ ಯಾವುದೇ ಹೆಸರನ್ನು ಉಲ್ಲೇಖಿಸದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರೋಪಿಸಿದ್ದಾರೆ.

Join Whatsapp