ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆದ್ರೋಡಿ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮಂಗಳೂರಿನಿಂದ ಸಿಮೆಂಟ್ ತುಂಬಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲೇ ಬೆಂಕಿ ಲಾರಿಯನ್ನು ಪೂರ್ತಿಯಾಗಿ ಆವರಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಲಾರಿ ಭಸ್ಮವಾಗಿದೆ.
ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.