ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ಬಿಜೆಪಿಗರ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ

Prasthutha|

- Advertisement -

ಜಾರ್‌ಗ್ರಾಂ (ಪಶ್ಚಿಮ ಬಂಗಾಳ): ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ಬಿಜೆಪಿಗರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ತನಿಖಾ ಸಂಸ್ಥೆಗಳು ಹಿಂಜರಿಯುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ತ್ವರಿತವಾಗಿ ಕ್ರಮ ಕೈಗೊಳ್ಳುತ್ತಿದ್ದು, ಬಿಜೆಪಿಯವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದೆ. ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ನಡೆಸಿದ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ಪ್ರಸನ್ನ ರಾಯ್‌ ಅವರ ನಿವಾಸದಿಂದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್‌ ಘೋಷ್‌ ಮನೆಯ ಖರೀದಿ ಪತ್ರ ವಶಪಡಿಸಿಕೊಳ್ಳಲಾಗಿದೆ. ಆದರೆ, ಹಗರಣದ ಆರೋಪಿ ರಾಯ್ ಅವರ ಮನೆಯಿಂದ ಬಿಜೆಪಿ ನಾಯಕನಿಗೆ ಸೇರಿದ ದಾಖಲೆಗಳನ್ನು ವಶಪಡಿಸಿಕೊಂಡ ಬಳಿಕವೂ ಏಕೆ ಬಂಧಿಸಲಿಲ್ಲ? ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಚುರುಕಾಗಿವೆ. ಆದರೆ, ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

Join Whatsapp