‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯ ಹೆಸರನ್ನು ಬದಲಿಸಿದ ಕೇಂದ್ರ ಸರ್ಕಾರ

Prasthutha|

ಹೊಸದಿಲ್ಲಿ: ಕೇಂದ್ರ ಸರ್ಕಾರವು ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವಾದ ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯ ಹೆಸರನ್ನು ಬದಲಾಯಿಸಿದ್ದು, ಈ ಅತ್ಯುನ್ನತ ಪುರಸ್ಕಾರಕ್ಕೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ ಮಾಡಲಾಗಿದೆ.

- Advertisement -

ಈ ಕುರಿತಂತೆ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ದೇಶದಾದ್ಯಂತ ನಾಗರಿಕರಿಂದ ಅನೇಕ ಮನವಿಗಳು ಬಂದಿತ್ತು. ಅವರ ಅಭಿಪ್ರಾಯಗಳಿಗಾಗಿ ಧನ್ಯವಾದಗಳು. ಅವರ ಭಾವನೆಗಳನ್ನು ಗೌರವಿಸುವ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Join Whatsapp