ಮಹಾರಾಷ್ಟ್ರದಲ್ಲಿ ಮುಂದುವರಿದ ರಾಜಕೀಯ ಬಿಕ್ಕಟ್ಟು: ಬಂಡಾಯ ಶಾಸಕರಿಗೆ Y+ ಭದ್ರತೆ ನೀಡಿದ ಮೋದಿ ಸರ್ಕಾರ

Prasthutha|

ಮುಂಬೈ: ಮೋದಿ ಸರ್ಕಾರ ಶಿವಸೇನೆಯ ಸುಮಾರು 15 ಬಂಡಾಯ ಶಾಸಕರಿಗೆ Y+ ಶ್ರೇಣಿಯ ಭದ್ರತೆಯನ್ನು ನೀಡಿದೆ ಎಂದು ಮೂಲಗಳು ಹೇಳಿರುವುದಾಗಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

- Advertisement -

ಸದ್ಯ ಮಹಾರಾಷ್ಟ್ರದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆಯನ್ನು ವ್ಯವಸ್ಥೆಗೊಳಿಸುವಂತೆ ಬಂಡಾಯ ಶಾಸಕರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು. ಈ ನಿಟ್ಟಿನಲ್ಲಿ ಬಂಡಾಯ ಶಾಸಕರಿಗೆ Y+ ಶ್ರೇಣಿಯ ಭದ್ರತೆಯನ್ನು ನೀಡಲು ಒಪ್ಪಿರುವುದಾಗಿ ತಿಳಿದು ಬಂದಿದೆ.

ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಏಕನಾಥ್ ಶಿಂಧೆ ನೇತೃತ್ವದ 40ಕ್ಕೂ ಅಧಿಕ ಶಾಸಕರು ಅಸ್ಸಾಮ್’ನ ಗುವಾಹಟಿಯ ರ‍್ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ.

- Advertisement -

ಈ ಮಧ್ಯೆ ಸರ್ಕಾರ ಉಳಿಸಿಕೊಳ್ಳುವುದರ ಜೊತೆಗೆ ಬಂಡಾಯ ಶಾಸಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶಾಸಕರು ಮತ್ತು ಕುಟುಂಬಸ್ಥರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿದ್ದರು.



Join Whatsapp