ರಾಜ್ಯಗಳು ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬಹುದು: ಸುಪ್ರೀಂ ಕೋರ್ಟ್‌’ಗೆ ತಿಳಿಸಿದ ಕೇಂದ್ರ ಸರ್ಕಾರ

Prasthutha|

ನವದೆಹಲಿ: ಹಿಂದೂಗಳು ಅಲ್ಪಸಂಖ್ಯಾತರಾಗಿರುವ ರಾಜ್ಯಗಳಲ್ಲಿ ಆಯಾ ರಾಜ್ಯಗಳು ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬಹುದು ಎಂದು ಸುಪ್ರೀಂಕೋರ್ಟ್’ಗೆ ಕೇಂದ್ರ ಸರ್ಕಾರ ತಿಳಿಸಿದೆ.
ದೇಶದ 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಕೋರಿದ ಅರ್ಜಿಯ ವಿಚಾರಣೆಯ ವೇಳೆ ಈ ವಿಚಾರವನ್ನು ಕೇಂದ್ರ ಸ್ಪಷ್ಟಪಡಿಸಿದೆ.

- Advertisement -

ಹಿಂದೂಯಿಸಂ, ಜೂದಾಯಿಸಂ ಹಾಗೂ ಬಾಹಾಯಿಸಂ ಅನುಯಾಯಿಗಳಿಗೆ ಲಡಾಖ್, ಲಕ್ಷದ್ವೀಪ, ಮೇಘಾಲಯ, ನಾಗಾಲ್ಯಾಂಡ್‌, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್‌ ಹಾಗೂ ಮಣಿಪುರ ರಾಜ್ಯಗಳಲ್ಲಿ ಆರ್ಟಿಕಲ್ 29 ಹಾಗೂ 30ರ ಅಡಿಯಲ್ಲಿ
ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದು ಸರಿಯಲ್ಲ ಎಂದು ಕೇಂದ್ರ ಸುಪ್ರೀಂಕೋರ್ಟ್’ಗೆ ತಿಳಿಸಿದೆ.


ರಾಜ್ಯಗಳಲ್ಲಿನ ಆಯಾ ವಿಭಾಗದ ಜನಸಂಖ್ಯೆಗೆ ಅನುಗುಣವಾಗಿ ಅಲ್ಪಸಂಖ್ಯಾತ ಸ್ಥಾನಮಾನವನ್ನು ನಿರ್ಧರಿಸಲಾಗುತ್ತದೆ ಎಂದು ಟಿಎಂಎ ಪೈ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಪ್ರಸ್ತಾಪಿಸಿ ಕೇಂದ್ರ ಹೇಳಿದೆ.
ಅಲ್ಪಸಂಖ್ಯಾತ ಸ್ಥಾನಮಾನವನ್ನು ನಿರ್ಧರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ವಾದಿಸಿದ ಅರ್ಜಿದಾರರಾದ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ, 2016ರಲ್ಲಿ ಮಹಾರಾಷ್ಟ್ರ ಸರ್ಕಾರ ಯಹೂದಿಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿರುವುದನ್ನು ಉಲ್ಲೇಖಿಸಿದರು.
ಉರ್ದು, ತೆಲುಗು, ಮಲಯಾಳಂ, ತಮಿಳು, ಮರಾಠಿ ಹಾಗೂ ತುಳು ಭಾಷಿಕರನ್ನು ಭಾಷಾ ಅಲ್ಪಸಂಖ್ಯಾತರಾಗಿ ಕರ್ನಾಟಕ ಸರ್ಕಾರ ಗುರುತಿಸಿದೆ ಎಂದು ಅಶ್ವಿನಿ ಉಪಾಧ್ಯಾಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

Join Whatsapp