ಪಟ್ನಾ: ಈ ದೇಶದ ಶೇ.73ರಷ್ಟು ಜನಸಂಖ್ಯೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.
ಬಿಹಾರ ರಾಜಧಾನಿ ಪಟ್ನಾದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆಯೋಜಿಸಿದ್ದ ‘ಜನ ವಿಶ್ವಾಸ ರ‍್ಯಾಲಿ’ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ.ದೇಶದಲ್ಲಿ ರೈತರು, ಯುವಕರು ಮತ್ತು ದಲಿತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರವು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಶೇ. 73ರಷ್ಟು ಜನಸಂಖ್ಯೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಹೇಳಿದ್ದಾರೆ.
ನಾವು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿ ಪಸರಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.