ಕರ್ನಾಟಕಕ್ಕೆ ಕೈ ಕೊಟ್ಟ ಕೇಂದ್ರ | ಬಿಡಿಗಾಸು ಇಲ್ಲದೆ ಸ್ಥಗಿತಗೊಂಡ ಹಲವಾರು ಯೋಜನೆಗಳು

Prasthutha|

ಬೆಂಗಳೂರು : ಪ್ರಮುಖ ಯೋಜನೆಗಳಾದ ಸ್ವಚ್ಛ ಭಾರತ, ಪ್ರಧಾನ ಮಂತ್ರಿ ಆವಾಸ್‌, ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಸೇರಿದಂತೆ ಹತ್ತು ಪ್ರಮುಖ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಬಿಡಿಗಾಸು ಕೂಡ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಬಹುತೇಕ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿದೆ.

- Advertisement -

ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ, ತೋಟಗಾರಿಕೆ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕೇಂದ್ರ ಮತ್ತು ರಾಜ್ಯದ ಪಾಲುದಾರಿಕೆಯ ಹತ್ತು ಯೋಜನೆಗಳಿಗೆ ಜುಲೈ ಅಂತ್ಯದವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ.

ಗ್ರಾಮ ಸಡಕ್‌, ಸ್ವಚ್ಛ ಭಾರತ, ಪ್ರಧಾನ ಮಂತ್ರಿ ಆವಾಜ್‌, ಕೃಷಿ ಯಾಂತ್ರಿಕತೆಯ ಮೇಲಿನ ಉಪ ಅಭಿಯಾನ, ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆ, ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ, ಸಂವಿಧಾನದ 275(1)ನೇ ವಿಧಿಯಡಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆ ಮತ್ತು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಅನುದಾನವೇ ಬಿಡುಗಡೆಯಾಗಿಲ್ಲ ಎಂದು ತಿಳಿದು ಬಂದಿದೆ.

- Advertisement -

ಈ ಮಾಹಿತಿಯನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಶೀಲನಾ ಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳೇ ಬಹಿರಂಗಪಡಿಸಿವೆ.

Join Whatsapp