ಬರ ಪರಿಹಾರಕ್ಕೆ ಬರೆದ ಪತ್ರಕ್ಕೆ ಕೇಂದ್ರದಿಂದ ಉತ್ತರವಿಲ್ಲ: ಸಚಿವ ಕೃಷ್ಣ ಭೈರೇಗೌಡ

Prasthutha|

ಚಾಮರಾಜನಗರ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಅಗತ್ಯ ಪರಿಹಾರ ನೀಡುವಂತೆ ಈಗಾಗಲೇ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಇಲ್ಲಿಯ ತನಕ ಯಾವುದೇ ಉತ್ತರ ಅಲ್ಲಿಂದ ದೊರಕಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 216 ತಾಲೂಕುಗಳಲ್ಲಿ ಬರ ಘೋಷಿಸಲಾಗಿದೆ. ಸಹಜವಾಗಿ ಕೇಂದ್ರ ಸರಕಾರದಿಂದ ಬರಬೇಕಾದ ಪರಿಹಾರಕ್ಕಾಗಿ ಕೇಂದ್ರ ಗೃಹ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಲು ಅವಕಾಶ ಕೇಳುತ್ತಿದ್ದೇವೆ. ಈ ತನಕ ಕೊಟ್ಟಿಲ್ಲ. ಮುಂದಿನ ವಾರ ದಿಲ್ಲಿಗೆ ತೆರಳಿ ಅಲ್ಲಿಯೇ ಸಚಿವರನ್ನು ಭೇಟಿ ಮಾಡುತ್ತೇವೆ.ಎನ್‌ಡಿಆರ್‌ಎಫ್ ಪ್ರಕಾರ ರಾಜ್ಯಕ್ಕೆ ಬರಬೇಕಾದ ಅನುದಾನ ಕೇಂದ್ರ ಸರಕಾರ ಕೊಡಬೇಕು. ಬರ ಬಂದಾಗ ಪರಿಹಾರ ಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕಾನೂನು ಪ್ರಕಾರ ಏನಿದೆಯೋ ಅದನ್ನು ಅವರು ಕೊಡಲಿ. ಮುಂದಿನ ದಿನಗಳಲ್ಲಿ ಆದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ಭರವಸೆ ನಮ್ಮದು ಎಂದು ಭೈರೇಗೌಡ ಹೇಳಿದರು.



Join Whatsapp