ಪೌರತ್ವ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ತರುವ ಪ್ರಸ್ತಾವನೆ ಇಲ್ಲ: ಕೇಂದ್ರ

Prasthutha|

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

- Advertisement -

ಈ ಕುರಿತು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರಾಯ್, ಪೌರತ್ವ ಕಾಯಿದೆಯಡಿಯ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದ ನಂತರವಷ್ಟೇ ಅರ್ಹ ಫಲಾನುಭವಿಗಳಿಗೆ ಭಾರತೀಯ ಪೌರತ್ವ ದೊರೆಯಲಿದೆ ಎಂದು ತಿಳಿಸಿದ್ದಾರೆ.  

ಕೇಂದ್ರ ಸರಕಾರ ಈ ಕಾಯಿದೆಯನ್ನು ಜನವರಿ 10, 2020ರಂದು ಜಾರಿಗೊಳಿಸಿತ್ತು. ಸರಕಾರ ತಿಳಿಸಿದಂತೆ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಅಲ್ಪಸಂಖ್ಯಾತರಾದ ಹಿಂದುಗಳು, ಸಿಖರು, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ ಈ ಕಾಯಿದೆಯಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗುವುದು.

Join Whatsapp