ತನಿಖಾ ಏಜೆನ್ಸಿಗಳನ್ನು ದುರುಪಯೋಗಪಡಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯ: ಭಟ್ಕಳ ಮಜ್ಲಿಸೆ ಇಸ್ಲಾಹ್-ವ-ತಂಝೀಮ್

Prasthutha|

ಭಟ್ಕಳ: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ವಿವಿಧ ರೀತಿಯಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಸಾಧನೆ ನಡೆಸುತ್ತಿದೆ ಎಂದು ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆ ಆರೋಪಿಸಿದೆ.

- Advertisement -

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಟ್ಕಳ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ, ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಎನ್.ಐ.ಎ.,ಈ.ಡಿ. ಮತ್ತು ಪೊಲೀಸರ ಮೂಲಕ PFI ಕಚೇರಿ ಮತ್ತು ನಾಯಕರ ಮೇಲೆ ದಿಢೀರ್ ದಾಳಿ ನಡೆಸಿ ವಶಕ್ಕೆ ಪಡೆದಿರುವುದು ಅತ್ಯಂತ ಖಂಡನೀಯ. ಇದು ಮುಸ್ಲಿಮರು ಮತ್ತು ದುರ್ಬಲ ವರ್ಗದ ವಿರುದ್ಧ ಸರಕಾರದ ಏಕಪಕ್ಷೀಯ ತುತ್ತು ದಬ್ಬಾಳಿಕೆಯ ಮುಂದುವರಿದ ಭಾಗವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಸಾಧನೆಗಾಗಿ ತೀರಾ ಕೆಳಮಟ್ಟಕ್ಕೆ ಇಳಿದು, ತನ್ನ ಅಧೀನ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದ ರಾಜಕೀಯ ಮತ್ತು ಸಾಮಾಜಿಕ ಸಂಘಟನೆಗಳ ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಅದರ ಪ್ರಮುಖ ನಾಯಕರನ್ನು ಬಂಧಿಸಿದೆ. ಇದು ಅತ್ಯಂತ ಖಂಡನೀಯ ತುತ್ತು ಹೇಯ ಕೃತ್ಯವಾಗಿದೆ ಎಂದು ಹೇಳಿದರು.

- Advertisement -

ತನಿಖಾ ಸಂಸ್ಥೆಗಳು ಪೂರಕವಾದ ಮತ್ತು ಸ್ಪಷ್ಟತಾದ ಪುರಾವೆಗಳನ್ನು ಪ್ರದರ್ಶಿಸದ ಹೊರತಾಗಿ ಇಂತಹ ಸಂಘಟನೆಗಳ ತನಿಖೆಗಳು, ವಿಭಿನ್ನ ಸಂದೇಶ ರವಾನಿಸುತ್ತದೆ. ತನಿಖೆಗಳು ಪಕ್ಷಪಾತವಿಲ್ಲದ ಮತ್ತು ರಾಜಕೀಯ ಪ್ರೇರಣೆಯಿಂದ ಮುಕ್ತವಾಗಿರಬೇಕು. ದ್ವೇಷ, ಪ್ರಚೋದನೆ, ವಿಧ್ವಂಸಕತೆ ತುತ್ತು ಹಿಂಸಾಚಾರದಲ್ಲಿ ಬಹಿರಂಗವಾಗಿ ತೊಡಗಿರುವ ಹಲವಾರು ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಕಾರಣ ತನಿಖಾ ಸಂಸ್ಥೆಗಳ ಈ ನಡೆ ಪ್ರಶ್ನಾರ್ಹವಾಗುತ್ತದೆ. ಆದ್ದರಿಂದ, ಈ ದಾಳಿಗಳು ಸಮಾಜಕ್ಕೆ ಅಹಿತಕರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ.

ಜನರು, ಪ್ರತಿಪಕ್ಷಗಳು, ಅಲ್ಪಸಂಖ್ಯಾತರು ಅಥವಾ ಸಮಾಜದ ಯಾವುದೇ ಸಾಮಾಜಿಕ ವರ್ಗಕ್ಕೆ ಸೇರಿದವರಾಗಿದ್ದರೂ ಅನ್ಯಾಯದ ರೀತಿಯಲ್ಲಿ ಕಿರುಕುಳಕ್ಕೆ ಒಳಪಡಿಸುವ ಸರ್ವ ಕಾರ್ಯಾಚರಣೆ ದಾಳಿಗಳು ಮತ್ತು ಕ್ರಮಗಳು ಖಂಡನಾರ್ಹವಾಗಿದೆ ಎಂದು ತಿಳಿಸಿದ್ದಾರೆ.

ದೇಶದ ಯಾವುದೇ ಅಭಿವೃದ್ಧಿಯನ್ನು ಮಾಡದ ಕೇಂದ್ರ ಬಿಜೆಪಿ ಸರ್ಕಾರ ಮುಂಬರುವ ಚುನಾವಣಾ ತಂತ್ರದ ಭಾಗವಾಗಿ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸುವ ಮೂಲಕ ರಾಜಕೀಯ ದುರ್ಲಾಭ ಪಡೆಯಬಯಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಗಳನ್ನು ನಿಷೇಧಿಸುವ, ಅದರ ಕಚೇರಿಗಳ ಮೇಲೆ ದಾಳಿ ಮಾಡುವ, ಸಂಘಟನೆಯ ಪ್ರಮುಖರನ್ನು ಬಂಧಿಸುವ ಮೂಲಕ ಹಿಂದುತ್ವ ಗುಂಪುಗಳಿಗೆ ತೃಪ್ತಿಪಡಿಸಲು ಹೊರಟಂತೆ ಕಾಣುತ್ತಿದೆ. ಜನರ ಭಾವನೆಗಳನ್ನು ಕೆರಳಿಸುವ ಮೂಲಕ ಮುಂದಿನ ಅವಧಿಗೆ ಅಧಿಕಾರ ಪಡೆಯುವ ನಿಮ್ಮ ಪ್ರಯತ್ನ ಫಲಿಸದು ಎಂದು ಹೇಳಿದ್ದಾರೆ.
ಸರಕಾರವು ಪ್ರತೀ ಹಂತದಲ್ಲೂ ನ್ಯಾಯ ಪಾಲನೆಯನ್ನು ಮಾಡಬೇಕು. ಅಪರಾಧ ಸಾಬೀತಾದರೆ ಮಾತ್ರ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನು ತಕ್ಷಣವೇ ಬಿಡುಗಡೆಗೊಳಿಸಿ, ಸಾರ್ವಜನಿಕರಲ್ಲಿ ವಿಶ್ವಾಸವನ್ನು ಮೂಡಿಸಬೇಕು ದ್ವೇಷದ ವಾತಾತರಣ ಅಂತ್ಯಗೊಳ್ಳಬೇಕು. ಎಲ್ಲಾ ವಿಧದ ಕೋಮುವಾದ ಮತ್ತು ಅನ್ಯಾಯ – ದಬ್ಬಾಳಿಕೆ ವಿರುದ್ಧ ನ್ಯಾಯಪ್ರಿಯ ಜನತೆ ಒಗ್ಗಟ್ಟಾಗಬೇಕೆಂದು ಅವರು ಮನವಿ ಮಾಡಿದ್ದಾರೆ.



Join Whatsapp